2ನೇ ಬಾರಿ ಅರ್ಜಿ ಸಲ್ಲಿಕೆ ದಿನಾಂಕ ಮುಂದೂಡಿದ ಅಂಚೆ ಇಲಾಖೆ.

ಭಾರತೀಯ ಅಂಚೆ ಇಲಾಖೆ ದೇಶಾದ್ಯಂತ ಸುಮಾರು 10 ಸಾವಿರಕ್ಕೂ ಹೆಚ್ಚು ಅಂಚೆ ಸೇವಕ ಹುದ್ದೆಗಳಿಗೆ ನೇಮಕ ಮಾಡಿಕೊಳ್ಳಲು ಇಲಾಖೆಯಲ್ಲಿ ಅಧಿಸೂಚನೆ ಪ್ರಕಟಿಸಿದ್ದು, ಕರ್ನಾಟಕ ವೃತ್ತದಲ್ಲಿ ಒಟ್ಟು 2,637 ಹುದ್ದೆಗಳಿಗೆ ನೇಮಕ ನಡೆಯಲಿದೆ. ಬ್ರಾಂಚ್‌ ಪೋಸ್ಟ್‌ ಮಾಸ್ಟರ್‌, ಅಸಿಸ್ಟೆಂಟ್‌ ಬ್ರಾಂಚ್‌ ಪೋಸ್ಟ್‌ ಮಾಸ್ಟರ್‌ ಮತ್ತು ದಕ್‌ ಸೇವಕ್‌ (ಅಂಚೆ ಸೇವಕ) ಹುದ್ದೆಗಳಿಗೆ ನೇಮಕ ನಡೆಯುತ್ತಿದ್ದು,  ಈಗಾಗಲೇ ಆನ್‌ಲೈನ್‌ ಅರ್ಜಿ ಸಲ್ಲಿಕೆ ಆರಂಭವಾಗಿದೆ. ಅಂಚೆ ಇಲಾಖೆಯ ಅಧಿಕೃತ ವೆಬ್-ಸೈಟ್ ಪ್ರಕಾರ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವನ್ನು ಎರಡನೇ ಬಾರಿ ಮುಂದೂಡಲಾಗಿದ್ದು ಹೊಸ ದಿನಾಂಕಗಳು ಈ ಕೆಳಗಿನಂತಿವೆ.

ರೆಜಿಸ್ಟ್ರೇಶನ್ ಮತ್ತು ಶುಲ್ಕ ಪಾವತಿಸಲು ಕೊನೆಯ ದಿನಾಂಕ : ಸೆಪ್ಟೆಂಬರ್‌ 16, 2019.

ಆನ್-ಲೈನ್ ಅರ್ಜಿ ಸಲ್ಲಿಸಲು ಕೆನೆಯ ದಿನಾಂಕ :  ಸೆಪ್ಟೆಂಬರ್‌ 22, 2019.

ಅರ್ಜಿ ಸಲ್ಲಿಸಲು ಬೇಕಾದ ಅರ್ಹತೆಗಳು

  • ವಯೋಮಿತಿ: ಅಭ್ಯರ್ಥಿಗಳ ಕನಿಷ್ಠ ವಯಸ್ಸು 18 ವರ್ಷ ಮತ್ತು ಗರಿಷ್ಠ ವಯೋಮಿತಿ 40 ವರ್ಷ. ನಿಯಮಾನುಸಾರ ಮೀಸಲಾತಿ ವ್ಯಾಪ್ತಿಗೆ ಬರುವ ಒಬಿಸಿ ಅಭ್ಯರ್ಥಿಗಳಿಗೆ ಮೂರು ವರ್ಷ ಹಾಗೂ ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳಿಗೆ ಐದು ವರ್ಷ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗಿರುತ್ತದೆ.
  • ಶೈಕ್ಷಣಿಕ ಅರ್ಹತೆ: ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಎಸ್‌ಎಸ್‌ಎಲ್‌ಸಿಯಲ್ಲಿ ತೇರ್ಗಡೆಯಾಗಿರಬೇಕು ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು. ಅಭ್ಯರ್ಥಿಗಳು ಕನ್ನಡದಲ್ಲಿಯೇ ವ್ಯಾಸಂಗ ಮಾಡಿರಬೇಕು ಹಾಗೂ 60 ದಿನಗಳ ಕಂಪ್ಯೂಟರ್‌ ಟ್ರೇನಿಂಗ್‌ ಕೋರ್ಸ್‌ ಸರ್ಟಿಫಿಕೇಟ್‌ ಪಡೆದಿರಬೇಕು. ಎಸ್‌ಎಸ್‌ಎಲ್‌ಸಿಯಲ್ಲಿ ಗಣಿತ ಮತ್ತು ಇಂಗ್ಲಿಷ್‌ ಭಾಷೆಯನ್ನು ಒಂದು ವಿಷಯನ್ನಾಗಿ ಅಧ್ಯಯನ ಮಾಡಿರುವುದು ಕಡ್ಡಾಯ. ಅಭ್ಯರ್ಥಿಗಳು ಆಯಾ ರಾಜ್ಯಗಳ ಸ್ಥಳೀಯ ಭಾಷೆಯಲ್ಲಿಯೇ ನಿಗದಿತ ವಿದ್ಯಾರ್ಹತೆ ಹೊಂದಿರಬೇಕು. ಒಂದು ವೇಳೆ ಕಂಪ್ಯೂಟರ್‌ ಅನ್ನು ಒಂದು ವಿಷಯವಾಗಿ ಓದಿದ್ದರೆ ಈ ಸರ್ಟಿಫಿಕೇಟ್‌ನ ಅವಶ್ಯಕತೆ ಇರುವುದಿಲ್ಲ. ಇದರೊಂದಿಗೆ ಅಭ್ಯರ್ಥಿಗಳು ದ್ವಿಚಕ್ರ ವಾಹನ ಚಾಲನೆ ಕೂಡ ತಿಳಿದಿರಬೇಕು.ಅರ್ಜಿ ಸಲ್ಲಿಸುವ ಮುನ್ನ ಒಬ್ಬ ಅಭ್ಯರ್ಥಿಗೆ ಒಂದು ಬಾರಿ ಮಾತ್ರ ಹೆಸರು ನೋಂದಣಿ ಮಾಡಿಕೊಳ್ಳಲು ಅವಕಾಶ ನೀಡಲಾಗಿದೆ. ಯಾವುದೇ ವೃತ್ತಕ್ಕೆ ಅರ್ಜಿ ಸಲ್ಲಿಸುವುದಾದರೂ ಅಭ್ಯರ್ಥಿಗಳು ಇದೇ ನೋಂದಣಿ ಸಂಖ್ಯೆಯನ್ನು ಬಳಸಬೇಕಾಗುತ್ತದೆ. ನೋಂದಣಿ ಮಾಡಿಕೊಳ್ಳುವಾಗ ಮೊಬೈಲ್‌ ಸಂಖ್ಯೆ ನಮೂದಿಸುವುದು ಕಡ್ಡಾಯ. ಒಬ್ಬ ಅಭ್ಯರ್ಥಿಯು ಗರಿಷ್ಠ 20 ವೃತ್ತದಲ್ಲಿನ ಹುದ್ದೆಗಳಿಗೆ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಅವಕಾಶ ನೀಡಲಾಗಿದೆ. ಶುಲ್ಕ ಪಾವತಿಸುವಾಗ ಪ್ರತಿ ಐದು ಆಯ್ಕೆಗಳಿಗೆ 100 ರೂ. ಶುಲ್ಕ(ಶುಲ್ಕ ವಿನಾಯ್ತಿ ಇರುವವರಿಗೆ ಅನ್ವಯವಾಗುವುದಿಲ್ಲ) ನಿಗದಿಪಡಿಸಲಾಗಿದೆ.

ಅರ್ಜಿ ಸಲ್ಲಿಸುವ ಮುನ್ನ ಒಬ್ಬ ಅಭ್ಯರ್ಥಿಗೆ ಒಂದು ಬಾರಿ ಮಾತ್ರ ಹೆಸರು ನೋಂದಣಿ ಮಾಡಿಕೊಳ್ಳಲು ಅವಕಾಶ ನೀಡಲಾಗಿದೆ. ಒಬ್ಬ ಅಭ್ಯರ್ಥಿಯು ಗರಿಷ್ಠ 20 ವೃತ್ತದಲ್ಲಿನ ಹುದ್ದೆಗಳಿಗೆ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದು. ಯಾವುದೇ ವೃತ್ತಕ್ಕೆ ಅರ್ಜಿ ಸಲ್ಲಿಸುವುದಾದರೂ ಅಭ್ಯರ್ಥಿಗಳು ಇದೇ ನೋಂದಣಿ ಸಂಖ್ಯೆಯನ್ನು ಬಳಸಬೇಕಾಗುತ್ತದೆ. ನೋಂದಣಿ ಮಾಡಿಕೊಳ್ಳುವಾಗ ಮೊಬೈಲ್‌ ಸಂಖ್ಯೆ ನಮೂದಿಸುವುದು ಕಡ್ಡಾಯ.  ಶುಲ್ಕ ಪಾವತಿಸುವಾಗ ಪ್ರತಿ ಐದು ಆಯ್ಕೆಗಳಿಗೆ 100 ರೂ. ಶುಲ್ಕ(ಶುಲ್ಕ ವಿನಾಯ್ತಿ ಇರುವವರಿಗೆ ಅನ್ವಯವಾಗುವುದಿಲ್ಲ) ನಿಗದಿಪಡಿಸಲಾಗಿದೆ.

ನೇಮಕಾತಿ ನಡೆಯಲಿರುವ ಹುದ್ದೆಗಳ ವಿವರ :

ಒಟ್ಟು 2,637 ಹುದ್ದೆಗಳ ಪೈಕಿ ವಿಕಲಚೇತನ ಅಭ್ಯರ್ಥಿಗಳಿಗೆ 103, ಎಸ್‌ಟಿ ಅಭ್ಯರ್ಥಿಗಳಿಗೆ 174, ಆರ್ಥಿಕ ದುರ್ಬಲ ವರ್ಗದವರಿಗೆ (ಇಡಬ್ಲುಎಸ್‌)260, ಎಸ್‌ಸಿ ಅಭ್ಯರ್ಥಿಗಳಿಗೆ 361, ಇತರೆ ಹಿಂದುಳಿದ ವರ್ಗದವರಿಗೆ 630, ಹಾಗೂ ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 1,109 ಹುದ್ದೆಗಳನ್ನು ಮೀಸಲಿಡಲಾಗಿದೆ.

ಅರ್ಜಿ ಶುಲ್ಕ: ಮಹಿಳಾ ಅಭ್ಯರ್ಥಿಗಳು, ವಿಕಲಚೇತನ ಅಭ್ಯರ್ಥಿಗಳು ಮತ್ತು ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದಿಂದ ವಿನಾಯ್ತಿ ನೀಡಲಾಗಿದ್ದು, ಸಾಮಾನ್ಯ, ಆರ್ಥಿಕ ದುರ್ಬಲ ವರ್ಗ ಮತ್ತು ಇತರೆ ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ 100 ರೂ. ಅರ್ಜಿ ಶುಲ್ಕ ನಿಗದಿಪಡಿಸಲಾಗಿದೆ. .

ವೇತನ : ಬ್ರಾಂಚ್‌ ಪೋಸ್ಟ್‌ ಮಾಸ್ಟರ್‌ ಹುದ್ದೆಗೆ 12,000 ರಿಂದ 14, 500ರೂ. ಗಳವರೆಗೆ ಹಾಗೂ ಅಸಿಸ್ಟೆಂಟ್‌ ಬ್ರಾಂಚ್‌ ಪೋಸ್ಟ್‌ ಮಾಸ್ಟರ್‌ ಮತ್ತು ಅಂಚೆ ಸೇವಕ ಹುದೆಗಳಿಗೆ 10,000 ರಿಂದ 12,000ರೂ.ಗಳವರೆಗೆ ವೇತನ ನಿಗದಿಪಡಿಸಲಾಗಿರುತ್ತದೆ.

ನೇಮಕಾತಿ ಪ್ರಕ್ರಿಯೆ: ಅಭ್ಯರ್ಥಿಗಳು ನಿಗದಿತ ವಿದ್ಯಾರ್ಹತೆಯಲ್ಲಿ ಪಡೆದಿರುವ ಅಂಕಗಳನ್ನು ಆಧರಿಸಿ ಆಯ್ಕೆ ಪ್ರಕ್ರಿಯೆ ನಡೆಯಲಿದೆ. ಇಬ್ಬರೂ/ ಅದಕ್ಕಿಂತ ಹೆಚ್ಚು ಅಭ್ಯರ್ಥಿಗಳು ಸಮಾನವಾದ ಅಂಕಗಳನ್ನು ಪಡೆದಿದ್ದಲ್ಲಿ ವಯೋಮಿತಿಯನ್ನು ಮಾನದಂಡವನ್ನಾಗಿ ಪರಿಗಣಿಸಿ ಹಿರಿತನದ ಆಧಾರದಲ್ಲಿ ಆಯ್ಕೆ ನಡೆಯುತ್ತದೆ. ಹೆಚ್ಚು ಓದಿದ್ದರೂ ಎಸ್‌ಎಸ್‌ಎಲ್‌ಸಿಯ ಅಂಕಗಳನ್ನಷ್ಟೇ ಪರಿಗಣಿಸಲಾಗುತ್ತದೆ. ನೇಮಕದ ಕುರಿತ ಮಾಹಿತಿಗಳನ್ನು ಎಸ್‌ಎಂಎಸ್‌ ಮೂಲಕ ಅಭ್ಯರ್ಥಿಗಳಿಗೆ ಕಳುಹಿಸಲಾಗುತ್ತದೆ.

ಅರ್ಜಿ ಸಲ್ಲಿಸಲು ಬೇಕಾದ ಪ್ರಮುಖ ದಾಖಲೆಗಳು: 

  • SSLC ಅಂಕಪಟ್ಟಿ (Marks Card)
  • ಪಾಸ್-ಪೋರ್ಟ್ ಸೈಜ್ ಭಾವಚಿತ್ರ
  • ಜಾತಿ ಪ್ರಮಾಣ ಪತ್ರ
  • ಕಂಪ್ಯೂಟರ್ ಶಿಕ್ಷಣ ಪ್ರಮಾಣ ಪತ್ರ ( ಆನ್-ಲೈನ್ ಅರ್ಜಿ ಸಲ್ಲಿಸುವಾಗ ಕಡ್ಡಾಯವಲ್ಲ.)
  • ವಿಶೇಷ ಚೇತನರ (ಅಂಗವಿಕಲ) ಪ್ರಮಾಣ ಪತ್ರ.

ಆನ್-ಲೈನ್ ಅರ್ಜಿ ಸಲ್ಲಿಸುವ ಸೇವೆ ಬಿ.ಸಿ.ರೋಡ್, ಬಂಟ್ವಾಳದಲ್ಲಿನ ನಮ್ಮ (fobza.com) ಕಚೇರಿಯಲ್ಲಿ ಲಭ್ಯ.

  • ವಿಳಾಸ: 2 ನೇ ಮಹಡಿ, ವಾಸುದೇವ ಪ್ಲಾಜಾ, ಬಿ.ಸಿ.ರೋಡ್, ಬಂಟ್ವಾಳ. 
  • ದೂರವಾಣಿ: 9449956744. 

ಅಂಚೆ ಇಲಾಖೆಯ ಅಧಿಕೃತ ವೆಬ್-ಸೈಟ್.

Advertisements

Leave a Reply

scroll to top of the page

LAYOUT

SAMPLE COLOR

Please read our documentation file to know how to change colors as you want

BACKGROUND COLOR

BACKGROUND TEXTURE

Open chat
1
Need help
How can we help you?